ಕೊಪ್ಪಳ : ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರವು ಸೆ.10ರಂದು 100 ದಿನಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.
2026ರ ಸೆ.10ಕ್ಕೆ ರಾಜ್ಯ ಸರ್ಕಾರವು 100 ದಿನಗಳ ಕಾರ್ಯಾವಧಿಯನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಸರ್ಕಾರವು ರಾಜ್ಯದ ಜನರಿಗೆ ಮತ್ತು ರೈತರಿಗೆ ಹಮ್ಮಿಕೊಂಡಿರುವ ಪಂಚ ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಪ್ರಚಾರ ಕಾರ್ಯ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಭವನ, ಕೊಪ್ಪಳ ಸಿಟಿಯ ಅಶೋಕ ವೃತ್ತ, ಗಂಜ್ ಹತ್ತಿರದ ಶ್ರೀ ಬಸವೇಶ್ವರ ವೃತ್ತ, ಇಟಗಿಯ ಮಹಾದೇವಾಲಯ, ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ, ಅಂಜನಾದ್ರಿ ಹಾಗು ಕನಕಾಚಲಪತಿ ದೇವಸ್ಥಾನ ಮತ್ತು ಹೊಸ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸೇರಿದಂತೆ ವಿವಿಧೆಡೆಯಲ್ಲಿ ವಿದ್ಯುತ್ ದೀಪಾಲಂಕಾರ ಏರ್ಪಡಿಸಿ ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಚಾರ ಕಾರ್ಯಕೈಗೊಳ್ಳಲಾಗುತ್ತಿದೆ.

