ಅ. ಶ. ಸುದ್ದಿ ಗಂಗಾವತಿ:
ಗಂಗಾವತಿ : ಗಂಗಾವತಿ ಅಬಕಾರಿ ವಲಯ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಅಬಕಾರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾದ ವಿವಿಧ ಕಂಪನಿಗಳ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಟೆಂಡರ್ ಕಮ್ ಬಹಿರಂಗ ಹರಾಜಿನ ಮೂಲಕ ವಿಲೇವಾರಿ ಮಾಡಲಾಗುತ್ತಿದೆ.

ಮಾನ್ಯ ಅಬಕಾರಿ ಉಪ ಆಯುಕ್ತರು, ಕೊಪ್ಪಳ ಜಿಲ್ಲೆ, ಕೊಪ್ಪಳ ಅವರ ಆದೇಶ ಸಂ: ಇಎಕ್ಸ್‌ಇ/ಸಿಆರ್‌ಎಂ/ಹರಾಜು/01/2026-27, ದಿನಾಂಕ 11.08.2026ರಂತೆ ಈ ಹರಾಜು ಪ್ರಕ್ರಿಯೆ ನಡೆಯಲಿದೆ.

ಆ.29ರಂದು ಬೆಳಿಗ್ಗೆ 11 ಗಂಟೆಯಿಂದ ಗಂಗಾವತಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಹರಾಜು ನಿರ್ವಹಣಾ ಅಧಿಕಾರಿಗಳ ಸಮ್ಮುಖದಲ್ಲಿ ನಿಗದಿತ ಷರತ್ತುಗಳಿಗೆ ಒಳಪಟ್ಟು ಟೆಂಡರ್ ಕಮ್ ಬಹಿರಂಗ ಹರಾಜು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹರಾಜಿನಲ್ಲಿ ಭಾಗವಹಿಸಲು ಆಸಕ್ತರು ನಿಗದಿತ ಷರತ್ತುಗಳು ಹಾಗೂ ನಿಯಮಗಳನ್ನು ಪಾಲಿಸಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿ ವಿಠ್ಠಲ ಪಿರಗನ್ನವರ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Need Help?